ದೇಹದಾನ ಮಾಡಿದ್ದ ಶರಣ ಕೌತಾಳ ವೀರಪ್ಪನವರ ಬದುಕು ಸಾರ್ಥಕ: ಸಿದ್ಧರಾಮ ಶ್ರೀ

ಬಸವ ಮೀಡಿಯಾ
ಬಸವ ಮೀಡಿಯಾ

ಗದಗ

ಇಟ್ಟರೆ ಶೆಗಣಿಯಾದೆ, ತಟ್ಟಿದರೆ ಕುರುಳಾದೆ, ಸುಟ್ಟರೆ ನೊಸಲಿಗೆ ವಿಭೂತಿಯಾದೆ, ನೀನಾರಿಗಾದೆಯೋ ಎಲೆ ಮಾನವ ಎಂಬುದು ಇಂದು ಬದಲಾವಣೆಯಾಗಿದೆ. ಮಾನವನ ಎಲ್ಲಾ ಅಂಗಾಂಗಗಳು ಸತ್ತ ನಂತರವೂ ಉಪಯೋಗಕ್ಕೆ ಬರುತ್ತವೆ. ಬದುಕಿದ್ದಾಗಲೇ ಮನಸ್ಸು ಮಾಡಬೇಕು. ದೇಹದಾನ ಮಾಡಿದ್ದ ಕೌತಾಳ ವೀರಪ್ಪನವರ ಬದುಕು ಸಾರ್ಥಕವಾದುದು ಎಂದು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿದರು.

ಲಿಂಗಾಯತ ಪ್ರಗತಿಶೀಲ ಸಂಘದ ೨೭೫೪ ನೇ ಶಿವಾನುಭವದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ದೇಹದಾನ ಇದೊಂದು ಸಮಾಜ ಸೇವೆ. ದೇಹದಾನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಗರಚನಾ ಶಾಸ್ತ್ರದ ಅಧ್ಯಯನಕ್ಕಾಗಿ ಅನುಕೂಲವಾಗುತ್ತದೆ. ವಿಜ್ಞಾನದ ಪ್ರಗತಿಗೆ, ವೈದ್ಯಕೀಯ ಸಂಶೋಧನೆಗೆ ದೇಹದಾನ ಮುಖ್ಯವಾಗಿದೆ ಎಂದು ಆಶೀರ್ವಚನ ನೀಡಿದರು.

ಉಪನ್ಯಾಸಕರಾಗಿ ಆಗಮಿಸಿದ ಗದುಗಿನ ಡಿ.ಜಿ.ಎಂ. ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಸ್.ಬಿ. ಗೋವಿಂದಪ್ಪ ಮಾತನಾಡಿ, ಮರಣಾನಂತರ ದೇಹದಾನ ಹಾಗೂ ಅಂಗಾಂಗ ದಾನ ವಿಷಯ ಕುರಿತು ಮಾತನಾಡುತ್ತಾ, ಮರಣಾ ನಂತರ ವ್ಯಕ್ತಿಯ ಶರೀರ ಉಪಯೋಗವಾದರೆ ಅವನೇ ಉತ್ತಮ ಮಾನವ. ಎಲ್ಲಾ ದಾನಗಳಿಗಿಂತ ದೇಹದಾನ ಮುಖ್ಯ. ದೇಹದಾನ ಮಾಡಿದ ವ್ಯಕ್ತಿಗೆ ಸ್ವರ್ಗ ಪ್ರಾಪ್ತಿಯಾಗುತ್ತದೆ. ಕಣ್ಣು, ಮೆದುಳು ಹೀಗೆ ಮಾನವನ ೨೬ ಅಂಗಾಂಗ ಉಪಯೋಗಕ್ಕೆ ಬರುತ್ತವೆ ಎಂದು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಜಿ. ಬಿ. ಪಾಟೀಲ ಮಾತನಾಡಿದರು. ೨೦೧೭ ನೇ ಸಾಲಿನ ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಎಂ. ಸಿ. ಐಲಿ ಮಾತನಾಡಿದರು.

ಸಂಗೀತ ಸೇವೆಯನ್ನು ಗುರುನಾಥ ಸುತಾರ ಹಾಗೂ ಶ್ರೀಮತಿ ಸವಿತಾ ಕುಪ್ಪಸದ ನೆರವೇರಿಸಿದರು. ಧಾರ್ಮಿಕ ಗ್ರಂಥ ಪಠಣವನ್ನು ಹರ್ಷಿತಾ ಬಿ. ಬಳಿಗೇರ ಹಾಗೂ ವಚನ ಚಿಂತನವನ್ನು ರಕ್ಷಿತಾ ಬಿ. ಬಳಿಗೇರ ಮಾಡಿದರು. ದಾಸೋಹ ಸೇವೆಯನ್ನು ವೈಜನಾಥ ಕೌತಾಳ ಹಾಗೂ ಕುಟುಂಬ ವರ್ಗ ಹಾಗೂ ಎಂ.ಸಿ. ಐಲಿ ವಹಿಸಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ ಪುರದ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮಶೇಖರ ಪುರಾಣಿಕ, ನಾಗರಾಜ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಸಹಚೇರ್ಮನ್ ಶಿವಾನಂದ ಹೊಂಬಳ ಸೇರಿದಂತೆ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಐ. ಬಿ. ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾ ಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JREWkVu0WPE5tE1y0tzNQ1

Share This Article
Leave a comment

Leave a Reply

Your email address will not be published. Required fields are marked *