ಡಾ. ಶರಣಪ್ರಕಾಶ ಪಾಟೀಲರಿಗೆ ಡಿಸಿಎಂ ಮಾಡುವಂತೆ ಮನವಿ

ಕಲಬುರಗಿ:

ಸೇಡಂ ಕ್ಷೇತ್ರದಿಂದ ನಾಲ್ಕು ಸಲ ಶಾಸಕರಾಗಿರುವ ಅದರಲ್ಲೂ ಮೂರು ಅವಧಿಗೆ ಸಚಿವರಾಗಿ ಉತ್ತಮ ಹಾಗೂ ಪ್ರಾಮಾಣೀಕರಾಗಿ ಕಾರ್ಯನಿರ್ವಹಿಸಿರುವ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಯನ್ನಾಗಿಮಾಡುವಂತೆ ಜಿಲ್ಲಾ ಆದಿ ಬಣಜಿಗ ಸಮಾಜದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿಪತ್ರ ನೀಡಿ ಮನವಿ ಮಾಡಿದ್ದಾರೆ.

ಡಾ. ಶರಣಪ್ರಕಾಶ ಪಾಟೀಲ ಅವರು ತಮ್ಮ ಗರಡಿಯಲ್ಲಿ ಬೆಳೆದಿದ್ದು, ತಾವು ಹಾಕಿಕೊಟ್ಟ ಮಾರ್ಗದಲ್ಲೇ ಮುನ್ನಡೆಯುತ್ತಿದ್ದಾರೆ. ಈಗಾಗಲೇ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡಿರುವುದು ತಮಗೆಲ್ಲ ತಿಳಿದ ವಿಷಯ.

ಸಚಿವರಾಗಿ ಕಲಬುರಗಿ ಮೆಡಿಕಲ್ ಹಬ್ ಮಾಡಿದ್ದಲ್ಲದೇ ಈ ಭಾಗದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹೀಗಾಗಿ ಮುಂದಿನ ಸಂಪುಟದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಜೊತೆಗೆ ಉತ್ತಮ ಖಾತೆ ನೀಡುವ ಮೂಲಕ ಆದಿ ಬಣಜಿಗ ಸಮಾಜವನ್ನು ಎತ್ತಿ ಹಿಡಿಯಬೇಕೆಂದು ಕೋರಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ಸೇರಿದಂತೆ ಇತರ ಚುನಾವಣೆಗಳಲ್ಲಿ ನಮ್ಮ ಸಮಾಜವು ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ನೀಡಿದ್ದರಿಂದ ಪಕ್ಷ ಗೆಲುವು ಸಾಧಿಸಲು ಕಾರಣವಾಗಿದೆ ಎಂದು ಇಲ್ಲಿ ಉಲ್ಲೇಖಿಸಬಹುದಾಗಿದೆ ಎಂದು ಮನವಿಪತ್ರದಲ್ಲಿ ಹೇಳಿ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಡಿಸಿಎಂ ಮಾಡಬೇಕೆಂದು ಕೋರಲಾಗಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Ky8rMVgQct2AZDAbXDYq2U

Share This Article
Leave a comment

Leave a Reply

Your email address will not be published. Required fields are marked *