ಕಚೇರಿ, ಶಿಕ್ಷಣ ಸಂಸ್ಥೆಗಳಲ್ಲಿ ಬಸವ ಜಯಂತಿ ಕಡ್ಡಾಯವಾಗಿ ಆಚರಿಸಲು ಆಗ್ರಹ

ಸೊರಬ:

ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ತಾಲ್ಲೂಕಿನ ಸರ್ಕಾರಿ ಕಚೇರಿಗಳು ಮತ್ತು ಶಾಲಾ, ಕಾಲೇಜು ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಲು ಒತ್ತಾಯಿಸಲಾಗಿದೆ.

ಈ ಬಗ್ಗೆ ನಿರ್ದೇಶನ ನೀಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕವು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ ಒತ್ತಾಯಿಸಿದೆ.

ತಾಲೂಕ ಘಟಕದ ಅಧ್ಯಕ್ಷರಾದ ಗುರುಕುಮಾರ ಪಾಟೀಲ ಅವರ ನೇತೃತ್ವದಲ್ಲಿ ಪತ್ರ ಸಲ್ಲಿಸಿ, ರಾಜ್ಯ ಸರ್ಕಾರದ ಮಟ್ಟದಲ್ಲಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು ತಾಲೂಕ ದಂಡಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಇಲಾಖೆಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡುವ ಮುಖಾಂತರ ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ ಸಾರಬೇಕು. ಸಾಂಸ್ಕೃತಿಕ ನಾಯಕರಿಗೆ ಗೌರವಿಸಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ.

ಮನವಿಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಮಾಲಮ್ಮ ಅಣ್ಣಾಜಿಗೌಡ್ರು, ಷಣ್ಮುಖಗೌಡ್ರು ಹರಳಿಗೆ, ಪುಟ್ಟರಾಜಗೌಡ್ರು ಹೆಗ್ಗೋಡು, ಬಸವರಾಜಗೌಡ್ರು ಬೆನ್ನೂರು, ಶಿವಕುಮಾರಗೌಡ್ರು ಕಡಸೂರ, ಶಿವಮೂರ್ತಿಸ್ವಾಮಿ ಶಾಂತಗೇರಿ ಮತ್ತು ರೈತ ಸಂಘದ ಉಮೇಶ ಪಾಟೀಲ  ಹಾಜರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/FjCpFjdZ7HXLwuA2LCEhga

Share This Article
Leave a comment

Leave a Reply

Your email address will not be published. Required fields are marked *