ಕಚೇರಿ, ಶಿಕ್ಷಣ ಸಂಸ್ಥೆಗಳಲ್ಲಿ ಬಸವ ಜಯಂತಿ ಕಡ್ಡಾಯವಾಗಿ ಆಚರಿಸಲು ಆಗ್ರಹ

ಸೊರಬ: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ತಾಲ್ಲೂಕಿನ ಸರ್ಕಾರಿ ಕಚೇರಿಗಳು ಮತ್ತು ಶಾಲಾ, ಕಾಲೇಜು ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಲು ಒತ್ತಾಯಿಸಲಾಗಿದೆ. ಈ ಬಗ್ಗೆ ನಿರ್ದೇಶನ ನೀಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕವು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ ಒತ್ತಾಯಿಸಿದೆ. ತಾಲೂಕ ಘಟಕದ ಅಧ್ಯಕ್ಷರಾದ ಗುರುಕುಮಾರ ಪಾಟೀಲ ಅವರ ನೇತೃತ್ವದಲ್ಲಿ ಪತ್ರ ಸಲ್ಲಿಸಿ, ರಾಜ್ಯ ಸರ್ಕಾರದ ಮಟ್ಟದಲ್ಲಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು ತಾಲೂಕ ದಂಡಾಧಿಕಾರಿಗಳ ಕಚೇರಿಯಲ್ಲಿ … Continue reading ಕಚೇರಿ, ಶಿಕ್ಷಣ ಸಂಸ್ಥೆಗಳಲ್ಲಿ ಬಸವ ಜಯಂತಿ ಕಡ್ಡಾಯವಾಗಿ ಆಚರಿಸಲು ಆಗ್ರಹ