ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ೭೬ನೇ ಜಯಂತಿ, ಭಾವೈಕ್ಯತಾ ದಿನಾಚರಣೆ

ಬಸವ ಮೀಡಿಯಾ
ಬಸವ ಮೀಡಿಯಾ

ಗದಗ

ತ್ರಿವಿಧ ದಾಸೋಹಿಗಳು, ಕನ್ನಡದ ಕುಲಗುರುಗಳೆಂದೇ ಖ್ಯಾತರಾದ ಲಿಂ.ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ೭೬ನೇ ಜಯಂತಿ ಅಂಗವಾಗಿ ಭಾವೈಕ್ಯತಾ ದಿನಾಚರಣೆ, ಗ್ರಂಥ ಬಿಡುಗಡೆ ಹಾಗೂ ಸಂಮಾನ ಸಮಾರಂಭ ನಾಳೆ (ದಿ.೨೧) ರಂದು ಶುಕ್ರವಾರ ಬೆಳಿಗ್ಗೆ ೧೦:೩೦ಕ್ಕೆ ನಗರದ ತೋಂಟದಾರ್ಯ ಮಠದಲ್ಲಿ ಜರುಗಲಿದೆ.

ಅಂದು ಬೆಳಿಗ್ಗೆ ೮:೩೦ ಗಂಟೆಗೆ ಭೀಷ್ಮಕೆರೆಯ ಮಹಾತ್ಮಾ ಬಸವೇಶ್ವರ ಪುತ್ಥಳಿಯಿಂದ ಶ್ರೀಮಠದವರೆಗೆ ಭಾವೈಕ್ಯತಾ ಯಾತ್ರೆ ಜರುಗಲಿದೆ. ಯಾತ್ರೆಯ ಉದ್ಘಾಟನೆಯನ್ನು ಮಾಜಿ ಶಾಸಕರಾದ ಡಿ.ಆರ್. ಪಾಟೀಲ ನೆರವೇರಿಸುವರು.

ಭಾವೈಕ್ಯತಾ ಯಾತ್ರೆಯ ನಂತರ ಶ್ರೀಮಠದಲ್ಲಿ ಜರುಗುವ ವೇದಿಕೆ ಕಾರ್ಯಕ್ರಮದ ಸಾನಿಧ್ಯವನ್ನು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸುವರು. ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು, ಭೈರನಟ್ಟಿ-ಶಿರೋಳದ ಶಾಂತಲಿಂಗ ಶ್ರೀಗಳು, ಸಂಡೂರು ವಿರಕ್ತಮಠದ ಪ್ರಭು ಶ್ರೀಗಳು, ಅರಸಿಕೆರೆಯ ಶಾಂತಲಿಂಗ ದೇಶಿಕೇಂದ್ರ ಶ್ರೀಗಳು, ಕೋರಣೇಶ್ವರ ಶ್ರೀಗಳು ಸಮ್ಮುಖ ವಹಿಸುವರು.

ಅಧ್ಯಕ್ಷತೆಯನ್ನು ಕಾನೂನು-ಸಂಸದೀಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ. ಪಾಟೀಲ ವಹಿಸುವರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಭೀಮವ್ವ ಶಿಳ್ಳೆಕ್ಯಾತರ ಅವರನ್ನು ಸಂಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ರಮೇಶ ಜಿಗಜಿಣಗಿ, ಶಾಸಕರಾದ ಜಿ.ಎಸ್ ಪಾಟೀಲ, ಸಿ.ಸಿ ಪಾಟೀಲ, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ, ಉಪವಿಭಾಗಾಧಿಕಾರಿಗಳಾದ ಮಹೇಶ ಮಾಲಗಿತ್ತಿ, ಸಾಹಿತಿಗಳಾದ ರಂಜಾನ್ ದರ್ಗಾ, ವೈದ್ಯರಾದ ಡಾ. ಸೊಲೊಮನ್, ಮಾಜಿ ಸಚಿವರಾದ ಎಸ್.ಎಸ್. ಪಾಟೀಲ, ಕಳಕಪ್ಪ ಬಂಡಿ, ಮಾಜಿ ಸಂಸದರಾದ ಐ.ಜಿ. ಸನದಿ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ ಆಗಮಿಸುವರು.

ಲಿಂಗೈಕ್ಯ ಗುರುಗಳ ಕುರಿತಾದ ಭೋಜರಾಜ ಸೊಪ್ಪಿಮಠ ವಿರಚಿತ `ಕರುಣಾಮಯಿ ಭಾಗ-೩’ ಹಾಗೂ ಡಾ.ಮಂಜುನಾಥ ಬಮ್ಮನಕಟ್ಟಿ ವಿರಚಿತ ಗೋಕಾಕ ಚಳುವಳಿ ಮತ್ತು ಕನ್ನಡ ಅಭಿವೃದ್ಧಿ ಗ್ರಂಥಗಳು ಲೋಕಾರ್ಪಣೆಗೊಳ್ಳುವವು. ಈ ಕಾರ್ಯಕ್ರಮಕ್ಕೆ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಅಭಿಮಾನಿಗಳು ಹಾಜರಿರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article
Leave a comment

Leave a Reply

Your email address will not be published. Required fields are marked *