ತುಮಕೂರು
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪೂಜ್ಯ ಸಿದ್ಧಲಿಂಗ ಮಹಾಸ್ವಾಮಿಗಳ ಉಪಸ್ಥಿಯಲ್ಲಿ ಅಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಎಸ್. ಆರ್. ಮೆಹ್ರೋಜ್ ಖಾನ್, ಉಪಾಧ್ಯಕ್ಷರು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರೊಂದಿಗೆ ಹಲವಾರು ಮುಸ್ಲಿಂ ಮುಖಂಡರು ಬಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಸರ್ವ ಧರ್ಮದ ಮುಖಂಡರುಗಳೊಂದಿಗೆ ಸಂವಾದ ನಡೆಸಿ ಸೌಹಾರ್ದತೆಯ ಬೆಳಕು ಚೆಲ್ಲಲಾಯಿತು.


ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಲಿ ಗೊರವಂಕೊಳ್ಳ, ಕೆಪಿಸಿಸಿ ವಕ್ತಾರರಾದ ಶ್ರೀ ಅನಿಲ್ ತಡಕಲ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಶ್ರೀನಿವಾಸ್ ವೇಲು ಹಾಗೂ ಕಾಂಗ್ರೆಸ್ ಮುಖಂಡರಾದ ಶ್ರೀ ಇಕ್ಬಾಲ್ ಅಹ್ಮದ್ ಸೇರಿದಂತೆ ರಾಜಕೀಯ ಹಾಗೂ ಸಂಘ, ಸಂಸ್ಥೆಗಳ ಮುಖಂಡರುಗಳು ಉಪಸ್ಥಿತರಿದ್ದರು.