ಸೋಲು-ಗೆಲುವು ಸಮನಾಗಿ ಸ್ವೀಕರಿಸಿ: ಗುರುಬಸವ ಪಟ್ಟದ್ದೇವರು

ಬಸವ ಮೀಡಿಯಾ
ಬಸವ ಮೀಡಿಯಾ

ಭಾಲ್ಕಿ:

ವಿದ್ಯಾರ್ಥಿಗಳು, ಸೋಲು-ಗೆಲುವನ್ನು ಲೆಕ್ಕಿಸದೆ ಸ್ಪರ್ಧೆಗಳಲ್ಲಿ ತೊಡಗುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಮಕ್ಕಳಲ್ಲಿ ಅಘಾದವಾದ ಪ್ರತಿಭೆ ಅಡಗಿದೆ. ಆ ಪ್ರತಿಭೆಯನ್ನು ಪ್ರದರ್ಶಿಸಿಲು ಸೂಕ್ತ ವೇದಿಕೆಯ ಅಗತ್ಯವಿದೆ ಎಂದು ಪೂಜ್ಯ ಗುರುಬಸವ ಪಟ್ಟದ್ದೇವರು ಮಾತನಾಡಿದರು.

ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ಹಾಗೂ ವಚನ ಜಾತ್ರೆ-2026 ಮತ್ತು ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಮತ್ತು ನಾಡೋಜ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ಯ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಯೋಜನೆಯ ಅಂತಿಮ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ಯ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಗೆ ಒಂದು ಒಳ್ಳೆಯ ಅವಕಾಶ ಕಲ್ಪಿಸಿಕೊಡಲಾಗಿದೆ. ಪೂಜ್ಯರ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಮಾನವೀಯ ಕಾರ್ಯಗಳು ಇಂದಿನ ಯುವಪೀಳಿಗೆ ತಿಳಿದುಕೊಂಡು ದೇಶದಲ್ಲಿ ಸತ್‌ಪ್ರಜೆಗಳಾಗಿ ರೂಪಗೊಳ್ಳಬೇಕು.

ವಿದ್ಯಾರ್ಥಿಗಳು ಪಠ್ಯ ವಿಷಯಗಳ ಜೊತೆಗೆ ವಚನ ಸಾಹಿತ್ಯವನ್ನು ಅಧ್ಯಯನ ಮಾಡಿ ಸಂಸ್ಕಾರಯುತ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಪೂಜ್ಯರ ಜೀವನ ಸಂದೇಶವನ್ನು ತಮ್ಮ ಬದುಕಿನಲ್ಲಿ ಆದರ್ಶವಾಗಿಟ್ಟುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಶರಣ ಎಂ.ಬಂಡೆಪ್ಪ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನೆಯನ್ನು ರಾಜಕುಮಾರ ಹೆಬ್ಬಾಳೆ ಅವರು ಮಾಡಿದರು. ಮುಖ್ಯ ಅತಿಥಿಗಳಾಗಿ, ಶಂಭುಲಿಂಗ ಕಾಮಣ್ಣ, ಮಲ್ಲಮ್ಮ ಆರ್. ಪಾಟೀಲ, ಶುಭಾಂಗಿ ಚನ್ನಬಸವಣ್ಣ ಬಳತೆ, ಚಂದ್ರಕಾಂತ ಹೈಬತಪುರೆ, ವಿಲಾಸ ಬಕ್ಕಾ, ಶಂಕರ ಪಾಟೀಲ, ಡಾ. ಸಜ್ಜಲ ಬಳತೆ, ಶರಣೆ ಮಲ್ಲಮ್ಮ ನಾಗನಕೇರೆ, ಸುವರ್ಣಾ ಬಲ್ಲೂರೆ, ರುದ್ರಾಣಿ ವಿಲಾಸ ಬಕ್ಕಾ, ಸಂಗ್ರಾಮಪ್ಪ ಇಂಗಳೆ, ಗುಂಡಪ್ಪ ಸಂಗಮಕರ ಭಾಗವಹಿಸಿದ್ದರು.

ಬಸವಣ್ಣನವರ ವಿಗೃಹಕ್ಕೆ ಪೂಷ್ಪಾರ್ಚನೆಯನ್ನು ಶಿಖರೇಶ್ವರ ಶೆಟಕಾರ ಅವರು ಮಾಡಿದರು. ಪ್ರಾಸ್ತಾವಿಕವಾಗಿ ಬಸವರಾಜ ಪ್ರಭಾ ಮಾತನಾಡಿದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ವಚನ ಗಾಯನ ರಾಜು ಜುಬರೆ ಅವರು ನಡೆಸಿಕೊಟ್ಟರು.

ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/

Share This Article
Leave a comment

Leave a Reply

Your email address will not be published. Required fields are marked *