ಮೈಸೂರು
ಸುತ್ತೂರು ಶ್ರೀಕ್ಷೇತ್ರದಲ್ಲಿ ಸಂಪ್ರದಾಯದಂತೆ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಅವರ ಜಾತ್ರಾ ಮಹೋತ್ಸವ (ಸುತ್ತೂರು ಜಾತ್ರೆ)ವನ್ನು ಜ.15 ರಿಂದ 20ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ.
ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಸಾನ್ನಿಧ್ಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಂಚಾಲಕರುಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಥೋತ್ಸವ, ತೆಪ್ಪೋತ್ಸವ, ಕೊಂಡೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಎಂದಿನಂತೆ ಆರು ದಿನಗಳ ನಡೆಸಲು ಸಭೆ ತೀರ್ಮಾನ ಕೈಗೊಂಡಿತು.