ಮೈಸೂರು
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ ಭಾಗವತ ಜೆಎಸ್ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವದ ವಿಶೇಷ ಉಪನ್ಯಾಸವನ್ನು ಗುರುವಾರ ನೀಡಲಿದ್ದಾರೆ.
ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಮಠದ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಮಾರಂಭ ನಡೆಯಲಿದೆ. ಭಾಗವತ್ ಅವರು ‘ರಾಷ್ಟ್ರೀಯ ಅಭಿವೃದ್ಧಿಗೆ ಸಾಮಾಜಿಕ ಸೌಹಾರ್ದತೆ ಪ್ರೇರಕ’ ವಿಷಯವಾಗಿ ಮಾತನಾಡಲಿದ್ದಾರೆ.
ಕಾರ್ಯಕ್ರಮ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಮೋಹನ ಭಾಗವತ್ ಸದ್ಗುರು ಶ್ರೀ ಮಧುಸೂಧನ ಸಾಯಿ ಅವರ ‘ಆತ್ಮನೋ ಮೋಕ್ಷಾರ್ಥಂ ಜಗತ್ ಹಿತಾಯ ಚ’ ಎಂಬ ಕೃತಿಯನ್ನೂ ಬಿಡುಗಡೆ ಮಾಡುವರು.
