ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ರಾಜ್ಯ ಸರ್ಕಾರ ಪುನಃ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಲಿಂಗಾಯತ ಸಂಘಟನೆಗಳ ಪ್ರಮುಖರು ಬೀದರ್‌ನಲ್ಲಿ ಒತ್ತಾಯಿಸಿದ್ದಾರೆ.
ಬೆಂಗಳೂರಿನ ಕುಂಬಳಗೂಡು ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಚನ್ನಬಸವಾನಂದ ಸ್ವಾಮೀಜಿ ನೇತ್ರತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಲಿಂಗಾಯತ ಸಮುದಾಯದ ಎಲ್ಲ 102 ಒಳಪಂಡಗಳಿಗೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ಸಂಘಟನೆಗಳು ಆಗ್ರಹಿಸಿದರು.
“ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆ ಹಾಗೂ ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಕಳೆದ ಮೂರು ದಶಕಗಳಿಂದ ಲಿಂಗಾಯತ ಸಂಘಟನೆಗಳು ಹೋರಾಟ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವನ್ನಾಗಿ ಘೋಷಣೆಗೆ ಮುಂದಾಗುತ್ತಿಲ್ಲ,” ಎಂದರು.
2017ರಲ್ಲಿ ಲಿಂಗಾಯತರ ಹೋರಾಟಕ್ಕೆ ಮಣಿದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನದಾಸ ನೇತೃತ್ವದಲ್ಲಿ 7 ಜನ ತಜ್ಞರ ನಿಯೋಗ ರಚಿಸಿದರು. ರಚಿಸಿದರು.
ನಾಗಮೋಹನದಾಸ ವರದಿ ಆಧಾರದ ಮೇಲೆ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಮತ್ತು ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತರ ಸೌಲಭ್ಯ ನೀಡಬೇಕೆಂದು ಕೇಂದ್ರಕ್ಕೆ ಶಿಫಾರಸು ಕರ್ನಾಟಕ ಸರಕಾರ ಮಾಡಿತ್ತು. ಆದರೆ ಶಿಫಾರಸನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಾಪಸ್ ಕಳುಹಿಸಿತ್ತು.
“ಈ ಹಿನ್ನಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸಿದ್ದಪಿಡಿಸಿದ ಪ್ರಸ್ತಾವನೆಯನ್ನು ಮರು ಪರಿಶೀಲಿಸಿ, ಸೂಕ್ತ ಆಧಾರ ಹಾಗೂ ತಿದ್ದುಪಡಿಗಳೊಂದಿಗೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಆಗ್ರಹಿಸಿದರು.