ವಚನ ಗ್ಲೋಬಲ್ ವಿಶ್ವವಿದ್ಯಾಲಯಕ್ಕೆ ನೂರು ಕೋಟಿ, ನೂರು ಎಕರೆ ನೆರವಿಗೆ ಮನವಿ

ಬೆಂಗಳೂರು ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಲು ನೂರು ಕೋಟಿ, ನೂರು ಎಕರೆ ನೆರವನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಶುಕ್ರವಾರ ಭೇಟಿಮಾಡಿದ ಲಿಂಗಾಯತ ಮಠಾಧಿಪತಿಗಳು ಹಾಗೂ ಗಣ್ಯರು ಯೋಜನೆಯ ರೂಪುರೇಷೆಯನ್ನು ಚರ್ಚಿಸಿದರು. ‘ವಚನ ಗ್ಲೋಬಲ್ ವಿಶ್ವವಿದ್ಯಾಲಯ’ ಎಂದು ಕರೆಯಲಾಗುವ ಈ ವಿಶ್ವವಿದ್ಯಾಲಯದ ಮೂಲ ಉದ್ದೇಶ ಬಸವತತ್ವವನ್ನು ಜಾಗತಿಕ ಮಟ್ಟದಲ್ಲಿ ಅನುಷ್ಠಾನಕ್ಕೆ ತರುವುದಾಗಿರುತ್ತದೆ. ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಇದನ್ನು ಸ್ಥಾಪಿಸಿ ನಿರ್ವಹಿಸುತ್ತದೆ. ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಪ್ರತ್ಯೇಕ ಸಾರ್ವಜನಿಕ ದತ್ತಿಯನ್ನು … Continue reading ವಚನ ಗ್ಲೋಬಲ್ ವಿಶ್ವವಿದ್ಯಾಲಯಕ್ಕೆ ನೂರು ಕೋಟಿ, ನೂರು ಎಕರೆ ನೆರವಿಗೆ ಮನವಿ