ಬಜೆಟ್: ಸಿಎಂ ಭೇಟಿ ಮಾಡಿದ ಲಿಂಗಾಯತ ಪೂಜ್ಯರು, ಮುಖಂಡರು

ಬೆಂಗಳೂರು ಬರುವ ಬಜೆಟಿನಲ್ಲಿ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಗೆ ಅನುದಾನ ನೀಡುವಂತೆ ಲಿಂಗಾಯತ ಮಠಾಧಿಪತಿಗಳು ಹಾಗೂ ಗಣ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಬಸವಾದಿ ಶರಣರ ವಚನಗಳನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿಸಲು ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣದಲ್ಲಿ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಯಿತು. ನಿಯೋಗದ ಬೇಡಿಕೆಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಭೆಯಲ್ಲಿ ಭಾಗವಹಿಸಿದವರೊಬ್ಬರು ಹೇಳಿದರು. ಕಳೆದ ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ … Continue reading ಬಜೆಟ್: ಸಿಎಂ ಭೇಟಿ ಮಾಡಿದ ಲಿಂಗಾಯತ ಪೂಜ್ಯರು, ಮುಖಂಡರು