ಹರಿಹರ
ತನಿಖಾಧಿಕಾರಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ಆರೋಪ ಹೊತ್ತಿರುವ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.
ವಚನಾನಂದ ಸ್ವಾಮೀಜಿ ಸೋಮವಾರ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಬೇಕಾಗಿತ್ತು.
ತನಿಖಾಧಿಕಾರಿ ಹರಿಹರ ಗ್ರಾಮಾಂತರ ಪಿಐ ಸುರೇಶ್ ಸಗರಿ ಅವರು ಬೇರೆ ಪ್ರಕರಣ ಸಂಬಂಧ ಕೇಂದ್ರ ಸ್ಥಾನದಿಂದ ಹೊರ ಹೋಗಿರುವ ಕಾರಣ ವಿಚಾರಣೆ ಮುಂದೂಡಿಕೆಯಾಗಿದೆ.
