ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

2025-26 ನೇ ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-IIIಬಿ) ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಶೈಕ್ಷಣಿಕ ಸಾಲ ಯೋಜನೆಗಳಾದ ಬಸವ ಬೆಳಗು ಯೋಜನೆ (ಹೊಸದು), ಬಸವ ಬೆಳಗು ಯೋಜನೆ (ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸದು), ಜೀವಜಲಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತಮಹೋತ್ಸವದ ಮುನ್ನಡೆ ಯೋಜನೆ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವ ಫಲಾಪೇಕ್ಷಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.

ನಿಗಮವು ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಹಾಗೂ 2024-25 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂ.ಸಂ. 080 22865522, 9900012351, 9900012352 ನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿ ದೂ.ಸಂ.08272-221656 ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Dv8eAoC8n2rJOtZKYt4o86

Share This Article
Leave a comment

Leave a Reply

Your email address will not be published. Required fields are marked *