ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿ ಶುಭ ಕೋರಿದರು.
ವಿವಿಧ ಸ್ತರದ ಜನರ ಅಶೋತ್ತರಗಳಿಗೆ ಸ್ಪಂದಿಸಿ ಸಮಾಜದ ಸಮಗ್ರ ಅಭ್ಯುದಯಕ್ಕಾಗಿ ತಮ್ಮ ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.