ಬಸವಣ್ಣ, ಅಕ್ಕನ ಬಗ್ಗೆ ಅವಹೇಳನಕಾರಿ ಪೋಸ್ಟ್ ವಿರುದ್ಧ ಬಸವಸೈನ್ಯದ ಪ್ರತಿಭಟನೆ

ಕಿಡಿಗೇಡಿಯ ಬಂಧನಕ್ಕೆ ಆಗ್ರಹ ಬಸವನಬಾಗೇವಾಡಿ : ವಿಶ್ವಗುರು ಬಸವಣ್ಣನವರ ಹಾಗೂ ಶರಣೆ ಅಕ್ಕಮಹಾದೇವಿ ತಾಯಿಯವರ ಕುರಿತು ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಬರೆದು ಮಾನವಕುಲಕ್ಕೆ ಅವಮಾನ ಮಾಡಿರುವ ರಮಾಕಾಂತ್ ಎಂ. ಎಂಬ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಬಸವಸೈನ್ಯದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಬಸವಣ್ಣನವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ರಮಾಕಾಂತ್ ಎಂ. ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶರಣರ ಜನ್ಮಭೂಮಿಯಲ್ಲೇ … Continue reading ಬಸವಣ್ಣ, ಅಕ್ಕನ ಬಗ್ಗೆ ಅವಹೇಳನಕಾರಿ ಪೋಸ್ಟ್ ವಿರುದ್ಧ ಬಸವಸೈನ್ಯದ ಪ್ರತಿಭಟನೆ