ಯತ್ನಾಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕಲಬುರಗಿ

ಬಸವಣ್ಣನವರ ನಾಡಿನಲ್ಲಿ ಹುಟ್ಟಿ ಬಸವಣ್ಣನವರಿಗೆ ಅಪಮಾನ ಮಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.‌

ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಆರ್. ಜಿ. ಶೆಟಗಾರ ಅವರು, ಲಿಂಗಾಯತ ಸಮುದಾಯದಲ್ಲಿ ಹುಟ್ಟಿ ಬಸವಣ್ಣನವರ ಇತಿಹಾಸ ತಿಳಿಯದೆ ಹರಕುಬಾಯಿಯ ಯತ್ನಾಳ ಅವರು ಬಸವಣ್ಣನವರ ಬಗ್ಗೆ ಅವಹೇಳನ ಮಾಡಿರುವುದು ಖಂಡನಾರ್ಹ, ಬಸವಣ್ಣನವರು ಇಚ್ಚಾಮರಣ ಹೊಂದಿದ್ದಾರೆ. ಅದಕ್ಕೆ ವಚನ ಸಾಹಿತ್ಯದಲ್ಲಿ ಸಾಕಷ್ಟು ಸಾಕ್ಷಿಗಳು ಸಿಗುತ್ತವೆ. ಆದರೆ, ಯತ್ನಾಳ ಅವರು ಯಾವ ದಾಖಲೇ ಇಟ್ಟುಕೊಂಡು ಈ ರೀತಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ತಿಳಿಯುತ್ತಿಲ್ಲ‌ ಎಂದು ಕಿಡಿಕಾರಿದ ಅವರು ಯತ್ನಾಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಪ್ರಭುಲಿಂಗ ಮಹಾಗಾಂವಕರ, ಮುಖಂಡರಾದ ಸಂಗಮೇಶ ಗುಬ್ಬೆವಾಡ, ಅಂಬಾರಾಯ ಬಿರಾದಾರ, ಹಣಮಂತರಾವ ಪಾಟೀಲ, ಅಶೋಕ ಘೂಳಿ ಸೇರಿದಂತೆ ‌ಇತರರು ಉಪಸ್ಥಿತರಿದ್ದರು.

Share This Article
Leave a comment

Leave a Reply

Your email address will not be published. Required fields are marked *